ಅಪಘಾತದಲ್ಲಿ ಅಗ್ನಿಶಾಮಕದಳದ ಸಿಬ್ಬಂದಿ ಮೃತ್ಯು- 6 ತಿಂಗಳ ಹಸುಗೂಸನ್ನು ಕೊಂದು ಪತ್ನಿ ಆತ್ಮಹತ್ಯೆ

ಮಂಗಳೂರು ಎ.17: ಕುಂಟಿಕಾನ ಬಳಿ ರಸ್ತೆ ದಾಟುವ ವೇಳೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಅಗ್ನಿಶಾಮಕ ಇಲಾಖೆ ಮಂಗಳೂರಿನಲ್ಲಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಂಗಳೂರಿನ ಅಗ್ನಿಶಾಮಕ ಇಲಾಖೆಯಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಂಗಾಧರ ಬಿ ಕಮ್ಮಾರ (36) ಮೃತಪಟ್ಟವರು. ಈ ನಡುವೆ, ಮಂಗಳೂರಿನಲ್ಲಿ ಪತಿ ಅಪಘಾತದಲ್ಲಿ ಮೃತಪಟ್ಟಿರುವ ವಿಷಯ ತಿಳಿದ ಪತ್ನಿ ಶೃತಿ (30) ತನ್ನ 6 ತಿಂಗಳ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿರುವುದಾಗಿ ತಿಳಿದುಬಂದಿದೆ. ಮಂಗಳೂರು ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಅಪಘಾತ ನಡೆದಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!