ಜನರಿಗೆ ಏನು ತಿನ್ನಬೇಕು ಅಥವಾ ತಿನ್ನಬಾರದು ಎಂದು ಹೇಳುವುದು ಸರಕಾರದ ಕೆಲಸವಲ್ಲ- ಕೇಂದ್ರ ಸಚಿವ

ಮುಂಬೈ ಎ.17: ಜನರಿಗೆ ಏನು ತಿನ್ನಬೇಕು ಅಥವಾ ತಿನ್ನಬಾರದು ಎಂದು ಹೇಳುವುದು ಸರಕಾರದ ಕೆಲಸವಲ್ಲ. ದೇಶದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಅವರವರ ಇಷ್ಟದ ಆಹಾರವನ್ನು ತಿನ್ನಲು ಸ್ವಾತಂತ್ರ್ಯವಿದೆ” ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿರುವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಹೇಳಿದ್ದಾರೆ.

ಈ ವಿಚಾರವಾಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಭಾರತೀಯರಿಗೆ ತಮ್ಮ ನಂಬಿಕೆಯನ್ನು ಆಚರಿಸಲು ಸ್ವಾತಂತ್ರ್ಯವಿದೆ  ಹಾಗೂ ಧಾರ್ಮಿಕ ಸಮುದಾಯಗಳ ನಡುವೆ ಯಾವುದೇ ಅಸಹಿಷ್ಣುತೆ ಬೆಳೆಯುತ್ತಿಲ್ಲ. ಆದರೆ “ದೇಶದಲ್ಲಿ ಶಾಂತಿ ಹಾಗೂ ಸಮೃದ್ಧಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕೆಲವು ದುಷ್ಟ ಶಕ್ತಿಗಳು ಭಾರತದ ಅಂತರ್ಗತ ಸಂಸ್ಕೃತಿ ಹಾಗೂ ಬದ್ಧತೆಗೆ ಭಂಗ ತರಲು ಪ್ರಯತ್ನಿಸುತ್ತವೆ” ಎಂದು ಹೇಳಿದ್ದಾರೆ.

ಇದೇ ವೇಳೆ ಹಿಜಾಬ್ ವಿವಾದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಭಾರತದಲ್ಲಿ ಹಿಜಾಬ್ ಮೇಲೆ ಯಾವುದೇ ನಿಷೇಧವಿಲ್ಲ. ಮಾರುಕಟ್ಟೆಗಳಲ್ಲಿ ಹಾಗೂ ಇತರ ಸ್ಥಳಗಳಲ್ಲಿ ಹಿಜಾಬ್ ಧರಿಸಬಹುದು. ಆದರೆ ಪ್ರತಿಯೊಂದು ಕಾಲೇಜು ಅಥವಾ ಸಂಸ್ಥೆಯು ವಸ್ತ್ರ ಸಂಹಿತೆ(ಡ್ರೆಸ್ ಕೋಡ್), ಶಿಸ್ತು ಮತ್ತು ಗೌರವ ಹೊಂದಿದೆ. ಇದನ್ನು ನಾವು ಒಪ್ಪಿಕೊಳ್ಳಲೇಬೇಕು. ನಿಮಗೆ ಇಷ್ಟವಿಲ್ಲದಿದ್ದರೆ, ನೀವು ಬೇರೆ ಸಂಸ್ಥೆಯನ್ನು ಆಯ್ಕೆ ಮಾಡಬಹುದು ”ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!