| ಹೊಸದಿಲ್ಲಿ ಎ.17: ಕೊರೋನ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಸರಕಾರದ ನಿರ್ಲಕ್ಷ್ಯದಿಂದಾಗಿ ಐದು ಲಕ್ಷ ಅಲ್ಲ 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವಿವಾರ ಹೇಳಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “ಮೋದಿ ಜೀ ಸತ್ಯವನ್ನು ಮಾತನಾಡುವುದಿಲ್ಲ ಅಥವಾ ಇತರರನ್ನು ಮಾತನಾಡಲು ಬಿಡುವುದಿಲ್ಲ, ಆಮ್ಲಜನಕದ ಕೊರತೆಯಿಂದ ಯಾರೂ ಸತ್ತಿಲ್ಲ ಎಂದು ಅವರು ಇನ್ನೂ ಸುಳ್ಳು ಹೇಳುತ್ತಾರೆ! ಕೋವಿಡ್ ಸಮಯದಲ್ಲಿ ಸರಕಾರದ ನಿರ್ಲಕ್ಷ್ಯದಿಂದಾಗಿ ಐದು ಲಕ್ಷ ಅಲ್ಲ, 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ನಾನು ಮೊದಲೇ ಹೇಳಿದ್ದೆ. ಪ್ರತಿ ಕೋವಿಡ್ ಸಂತ್ರಸ್ತರ ಕುಟುಂಬಕ್ಕೆ ರೂ. 4 ಲಕ್ಷ ಪರಿಹಾರವನ್ನು ನೀಡಿ ನಿಮ್ಮ ಜವಾಬ್ದಾರಿಯನ್ನು ಪೂರೈಸಿ ಮೋದಿ ಜೀ’’ ಎಂದು ಬರೆದುಕೊಂಡಿದ್ದಾರೆ. ಹಾಗೂ ಇದರ ಜೊತೆಗೆ ಜಾಗತಿಕ ಕೋವಿಡ್ ಸಾವಿನ ಸಂಖ್ಯೆಯನ್ನು ಸಾರ್ವಜನಿಕಗೊಳಿಸಲು ಡಬ್ಲ್ಯು ಎಚ್ ಒ ನ ಪ್ರಯತ್ನಗಳನ್ನು ಭಾರತ ತಡೆಯುತ್ತಿದೆ ಎಂದು ನ್ಯೂಯಾರ್ಕ್ ಟೈಮ್ಸ್’ ವರದಿಯ ಸ್ಕ್ರೀನ್‌ಶಾಟ್ ನ್ನು ಟ್ವೀಟ್ ನಲ್ಲಿ ಹಂಚಿಕೊಂಡಿದ್ದಾರೆ. | |