ಉಡುಪಿ: ಇಂದು ರಾತ್ರಿಯಿಂದ ಗುರುವಾರ ತನಕ ಸೆಕ್ಷನ್ 144 ಜಾರಿ
ಉಡುಪಿ: (ಉಡುಪಿ ಟೈಮ್ಸ್ ವರದಿ) ಹಿಂದೂಗಳ ದಶಕಗಳ ಕನಸು ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಉಡುಪಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳವಾರದಿಂದ ಗುರುವಾರ ತನಕ ಸೆಕ್ಷನ್ 144 ಜಾರಿ ಮಾಡಲಾಗಿದೆ.
ನಾಳೆ ಆಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದು, ಇದೇ ಕಾರಣಕ್ಕೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ನಾಳೆ ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಅದರಂತೆ ನಗರದಲ್ಲಿ ಇಂದು ರಾತ್ರಿ 8 ರಿಂದ ಗುರುವಾರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪುಗೂಡುವಿಕೆ, ಸಾರ್ವಜನಿಕ ಸಭೆ ಇತ್ಯಾದಿಗಳನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಆ.4ರಂದು (ಇಂದು) ರಾತ್ರಿ 8 ರಿಂದ ಆ.6 ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ನೀಡಿದ್ದಾರೆ.
ಸಮಯಕ್ಕೆ ಸರಿಯಾದ ಸಮಾಚಾರ ಕೊಡುತ್ತಿರುವ ನಿಮಗೆ ಧನ್ಯವಾದಗಳು