ರಾಮ ಮಂದಿರದ ಶಿಲಾನ್ಯಾಸ: ಉಡುಪಿಯಲ್ಲಿ ಮದ್ಯ ಮಾರಾಟ ನಿಷೇಧ

ಉಡುಪಿ: (ಉಡುಪಿ ಟೈಮ್ಸ್ ವರದಿ) ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರದ ಶಿಲಾನ್ಯಾಸ ಆ.5ರಂದು ನಡೆಯಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಆ.4ರಂದು (ಇಂದು) ರಾತ್ರಿ 8 ರಿಂದ ಆ.6 ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ನೀಡಿದ್ದಾರೆ.

ನಾಳೆ ಆಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದು, ಇದೇ ಕಾರಣಕ್ಕೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ನಾಳೆ ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಅದರಂತೆ ನಗರದಲ್ಲಿ ಇಂದು ರಾತ್ರಿ 8 ರಿಂದ ಗುರುವಾರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪುಗೂಡುವಿಕೆ, ಸಾರ್ವಜನಿಕ ಸಭೆ ಇತ್ಯಾದಿಗಳನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. 




Leave a Reply

Your email address will not be published. Required fields are marked *

error: Content is protected !!