ಭಾರಿ ಮಳೆ: ಉಡುಪಿ, ದ.ಕ., ಉ.ಕ. ಎರಡು ದಿನ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: (ಉಡುಪಿ ಟೈಮ್ಸ್ ವರದಿ) ಹವಾಮಾನ ವೈಪರೀತ್ಯದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆ.4 ಮತ್ತು 5ರಂದು ಭಾರಿಯಿಂದ ಅತೀ ಭಾರಿ ಮಳೆಯಾಗಲಿದೆ.

ಮೂರೂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 204.5 ಮಿ ಮೀ.ಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನದಿ ತೀರದ ವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ ಅ.4ರಂದು ಮಧ್ಯಾಹ್ನ 1 ಗಂಟೆಯಿಂದ ಆ.5ರಂದು ಬೆಳಗ್ಗೆ 8.30ರ ತನಕ ರೆಡ್ ಅಲರ್ಟ್ ಇದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

Leave a Reply

Your email address will not be published. Required fields are marked *

error: Content is protected !!