ಶ್ರೀಕೃಷ್ಣ ಮಠ: ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೇರ ಪ್ರಸಾರ

ಉಡುಪಿ: ಆಗಸ್ಟ್ 05 ರಂದು ಅಯೋಧ್ಯ ಶ್ರೀ ರಾಮ ಜನ್ಮಭೂಮಿಯಲ್ಲಿ ನಡೆಯುವ ಶ್ರೀರಾಮ ಮಂದಿರದ ಭೂಮಿ ಪೂಜನಾ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಉಡುಪಿ ಶ್ರೀಕೃಷ್ಣ ಮಠದ ಮಧ್ವ ಮಂಟಪದಲ್ಲಿ ನಡೆಯಲಿದೆ.

ಬೆಳಿಗ್ಗೆ 11ರಿಂದ ಶ್ರೀ ರಾಮ ನಾಮ ಜಪ, ಭಜನೆ ನಡೆಯಲಿದ್ದು ಈ ಕಾರ್ಯಕ್ರಮ ದಲ್ಲಿ ಪರ್ಯಾಯ ಶ್ರೀ ಅದಮಾರು ಸ್ವಾಮೀಜಿಗಳು ಭಾಗವಹಿಸಲಿರುವರು ಎಂದುವಿಶ್ವ ಹಿಂದು ಪರಿಷದ್, ಬಜರಂಗದಳ  ಸಂಘಟನೆ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!