ದೇಶಾದ್ಯಂತ ಹಲಾಲ್ ಉತ್ಪನ್ನ ನಿಷೇಧಿಸುವಂತೆ ಸುಪ್ರೀಂಕೋರ್ಟ್’ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ

ನವದೆಹಲಿ ಎ.23: ದೇಶಾದ್ಯಂತ ಹಲಾಲ್ ಉತ್ಪನ್ನಗಳನ್ನು ನಿಷೇಧಿಸುವಂತೆ ಕೋರಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ.

ವಕೀಲ ವಿಭೋರ್ ಆನಂದ್ ಎಂಬುವರು ಹಲಾಲ್ ಉತ್ಪನ್ನಗಳನ್ನು ಹಾಗೂ ಹಲಾಲ್ ಪ್ರಮಾಣೀಕರಣವನ್ನು ನಿಷೇಧಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ಹಲಾಲ್ ಉತ್ಪನ್ನಗಳನ್ನು ಮಾರಾಟ ಮಾಡುವುದು ಸಂವಿಧಾನ 14 ಹಾಗೂ 21 ನೇ ವಿಧಿಯ ಉಲ್ಲಂಘನೆಯಾಗಿದೆ.

ದೇಶದಲ್ಲಿ 1974 ರಲ್ಲಿ ಹಲಾಲ್ ಪ್ರಮಾಣೀಕರಣ ವ್ಯವಸ್ಥೆ ಆರಂಭವಾಗಿದ್ದು, ಮೊದಲಿಗೆ ಇದು ಮಾಂಸದ ಉತ್ಪನ್ನಗಳಿಗೆ ಸೀಮಿತವಾಗಿತ್ತು. ಈಗ ಫಾರ್ಮಾಸ್ಯುಟಿಕಲ್ಸ್. ಕ್ಯಾಸ್ಮೆಟಿಕ್ಸ್, ಆರೋಗ್ಯ ಉತ್ಪನ್ನಗಳು, ವೈದ್ಯಕೀಯ ಉಪಕರಣಗಳಿಗೂ ಪ್ರಮಾಣೀಕರಣ ನೀಡಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಹಾಗೂ, ದೇಶದಲ್ಲಿ 15% ಮಾತ್ರ ಇರುವ ಮುಸ್ಲಿಂ ಅಲ್ಪಸಂಖ್ಯಾತರಿಗೆ ಹಲಾಲ್ ಆಹಾರ ಬೇಕು ಎಂಬ ಕಾರಣಕ್ಕೆ 85% ಇರುವ ಇತರ ಜನಾಂಗಗಳ ಬಹುಸಂಖ್ಯಾತರ ಮೇಲೆ ಹಲಾಲ್ ಉತ್ಪನ್ನಗಳನ್ನು ಹೇರಲಾಗುತ್ತಿದೆ ಎಂದು ದೂರಲಾಗಿದೆ. 

Leave a Reply

Your email address will not be published. Required fields are marked *

error: Content is protected !!