ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು ಎ.25: ರಾಜ್ಯದಲ್ಲಿ ಕೋವಿಡ್ 4ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ ನಡೆಸಲಾಯಿತು.
ಎ. 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಎಲ್ಲ ರಾಜ್ಯಗಳ ಸಿಎಂಗಳ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಪೂರ್ವ ಬಾವಿಯಾಗಿ ನಡೆಸಿದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಮಾಹಿತಿ ಸಂಗ್ರಹಿಸಿ ಕೆಲವೊಂದು ಕೋವಿಡ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸೂಚನೆ ನೀಡಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಯವರು ಸೂಚಿಸಿರುವ ಹೊಸ ಮಾರ್ಗ ಸೂಚಿಯ ನಿಯಮಗಳು ಹೀಗಿವೆ :
1.ಸಾರ್ವಜನಿಕ ಸ್ಥಳಗಳಲ್ಲಿ, ಕರ್ತವ್ಯದ ಸ್ಥಳಗಳಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
2.ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ ವಿಧಿಸಲಾಗುತ್ತದೆ.
3. ಪ್ರಯಾಣದ ವೆಳೆಯೂ ಮಾಸ್ಕ್ ಕಡ್ಡಾಯವಾಗಿದೆ.
4.ಇದಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ವ್ಯಕ್ತಿಗಳು 2 ಅಡಿ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಬೇಕು.