ಗಂಗೊಳ್ಳಿ: ಅನಾರೋಗ್ಯದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ
ಗಂಗೊಳ್ಳಿ ಎ.25 (ಉಡುಪಿ ಟೈಮ್ಸ್ ವರದಿ): ತಮಗಿದ್ದ ಅನಾರೋಗ್ಯದಿಂದ ಮನನೊಂದು ಬೈಂದೂರಿನ ಪ್ರಶಾಂತ ಶೆಟ್ಟಿ ಎಂಬವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಮಾರು 5 ವರ್ಷದಿಂದ ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದ ಪ್ರಶಾಂತ ಶೆಟ್ಟಿ (58) ಅವರು ಅದಕ್ಕಾಗಿ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎ.19 ರಂದು ಡಯಾಲಿಸ್ ಗಾಗಿ ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದರು. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋಗಿದ್ದಾಗ ಠಾಣೆಯಲ್ಲಿ ಅವರಿಗೆ ಸಂಬಂಧಿಸಿದ ವಸ್ತುಗಳನ್ನು ಪೊಲೀಸರು ತೋರಿಸಿದ್ದು ಈ ವೇಳೆ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು.
ಆದರೆ ಇಂದು ಬೆಳಿಗ್ಗೆ ಪ್ರಶಾಂತ ಶೆಟ್ಟಿಯವರ ಮೃತದೇಹ ಗಂಗೊಳ್ಳಿ ಬಂದರ್ ಬಳಿ ಅರಬ್ಬೀ ಸಮುದ್ರದಲ್ಲಿ ತೇಲಾಡುತ್ತಿರುವುದು ಕಂಡು ಬಂದಿದೆ ಅದರಂತೆ ಪ್ರಶಾಂತ್ ಶೆಟ್ಟಿ ಅವರು ತಮಗಿದ್ದ ಕಾಯಿಲೆಯಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ವಾರಾಹಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಈ ಬಗ್ಗೆ ಬಾಲಕೃಷ್ಣ ಶೆಟ್ಟಿ ಎಂಬವರು ನೀಡಿದ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ