ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಆಯ್ಕೆ
ಕಾಪು ಎ.26 : ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಾಲಿನ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಅಧ್ಯಕ್ಷರಾದ ಅಲೆವೂರು ರಾಜೇಶ್ ಶೆಟ್ಟಿ ನೂತನ ಪಧಾದಿಕಾರಿಗಳನ್ನು ಘೋಷಣೆ ಮಾಡಿದರು.
ಅದರಂತೆ ನೂತನ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್, ಪ್ರಧಾನ ಕಾರ್ಯದರ್ಶಿಯಾಗಿ ಪುಂಡಲೀಕ ಮರಾಠೆ. ಉಪಾಧ್ಯಕ್ಷರಾಗಿ ಹರೀಶ್ ಕಟಪಾಡಿ, ಕೋಶಾಧಿಕಾರಿಯಾಗಿ ಅಬ್ದುಲ್ ಹಮೀದ್, ಜೊತೆ ಕಾರ್ಯದರ್ಶಿ ವಿಜಯ ಆಚಾರ್ಯ, ಕ್ರೀಡಾ ಕಾರ್ಯದರ್ಶಿ ಸಂತೋಷ ನಾಯ್ಕ್ ಅವರು ಆಯ್ಕೆಯಾಗಿದ್ದಾರೆ. ಈ ಸಂಧರ್ಭದಲ್ಲಿ ಕಾಪು ತಾಲೂಕು ನಿಕಟಪೂರ್ವ ಅಧ್ಯಕ್ಷ ರಾಕೇಶ್ ಕುಂಜೂರು ಉಪಸ್ಥಿತರಿದ್ದರು.