ಉಡುಪಿ: ಭಾರೀ ಗಾಳಿ – ಮಳೆ, ಮತ್ತೆ 3 ದಿನ ರೆಡ್ ಅಲರ್ಟ್
ಬೆಂಗಳೂರು: (ಉಡುಪಿ ಟೈಮ್ಸ್ ವರದಿ)ರಾಜ್ಯದ ಬಹುತೇಕ ಕಡೆ ಭಾರೀ ಗಾಳಿ ಸಹಿತ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ 5 ದಿನಗಳ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿರುವ ಭಾರತೀಯ ಹವಾಮಾನ ಇಲಾಖೆ, ರೆಡ್ ಅಲರ್ಟ್ ಘೋಷಣೆ ಮಾಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ
ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಆಗಸ್ಟ್ 6, 9, 10 ವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ, ಆಗಸ್ಟ್ 7 ಮತ್ತು 8 ಕ್ಕೆ ಹವಾಮಾನ ಇಲಾಖೆ ಅರೆಂಜ್ ಅಲರ್ಟ್ ಘೋಷಣೆ ಮಾಡಿದೆ