ಕೊರೋನಾ ಹೆಚ್ಚಾದರೆ ವಿಮಾನ ನಿಲ್ದಾಣ, ಗಡಿ ಜಿಲ್ಲೆಗಳಲ್ಲಿ ಮತ್ತೆ ಕಣ್ಗಾವಲು: ಸಿಎಂ ಬೊಮ್ಮಾಯಿ

ವಿಜಯಪುರ: ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತ್ತೆ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಭೀತಿ ಆವರಿಸಿದೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದ ಸಲಹೆಯನ್ನು ಆಧರಿಸಿ ರಾಜ್ಯದ ವಿಮಾನ ನಿಲ್ದಾಣಗಳು ಮತ್ತು ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಮತ್ತು ಕಣ್ಗಾವಲು ಕ್ರಮಗಳನ್ನು ಮತ್ತೆ ಜಾರಿಗೊಳಿಸಬಹುದು ಎಂದು ಮಂಗಳವಾರ ಹೇಳಿದ್ದಾರೆ.

ಇದೇ ವೇಳೆ ಕೊರೋನಾ ಹರಡುವುದನ್ನು ತಡೆಯಲು ಜನ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಸಿಎಂ ಮನವಿ ಮಾಡಿದರು. ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗದ ಕಾರಣ ಆತಂಕ ಪಡುವ ಅಗತ್ಯವಿಲ್ಲ, ಆದರೂ ನಾವು ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ಹಿಂದಿನ ಮೂರು ಅಲೆಗಳ ಸಮಯದಲ್ಲಿ ನೆರೆಯ ಮಹಾರಾಷ್ಟ್ರ ಮತ್ತು ಕೇರಳದ ಜನರು ಕೋವಿಡ್ ಆತಂಕಕ್ಕೆ ಕಾರಣರಾಗಿದ್ದರು. “ಆದ್ದರಿಂದ, ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಅವರ ಸಭೆಯ ನಂತರ ಕೇಂದ್ರದ ಸಲಹೆಯನ್ನು ಆಧರಿಸಿ, ರಾಜ್ಯದ ವಿಮಾನ ನಿಲ್ದಾಣಗಳು ಮತ್ತು ಗಡಿ ಜಿಲ್ಲೆಗಳಲ್ಲಿ ವಿಶೇಷವಾಗಿ ಮಹಾರಾಷ್ಟ್ರ ಮತ್ತು ಕೇರಳ ಗಡಿಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಮತ್ತು ಕಣ್ಗಾವಲು ಕ್ರಮಗಳನ್ನು ಮತ್ತೆ ಜಾರಿಗೊಳಿಸುತ್ತೇವೆ” ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!