ಶಿವಮೊಗ್ಗ: ಗಾಂಜಾ ಮತ್ತಿನಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು- ಮೂವರ ಬಂಧನ

ಶಿವಮೊಗ್ಗ ಎ.26: ಗಾಂಜಾ ಮತ್ತಿನಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸುತ್ತಿದ್ದ ಮೂವರು ಆರೋಪಿಗಳನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಮೆಹಬೂಬ್ ನಗರದ ಸಲ್ಮಾನ್, ಅರ್ಬಾಜ್, ಉಸ್ಮಾನ್ ಬಂಧಿತ ಆರೋಪಿಗಳು. ಬೈಪಾಸ್ ರಸ್ತೆಯ ಸೇತುವೆ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮೂವರನ್ನು ದೊಡ್ಡಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢವಾಗಿದೆ. ಈ ವೇಳೆ ಆರೋಪಿಗಳ ವಿಚಾರಣೆ ನಡೆಸಿದಾಗ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿರುವುದನ್ನು ಬಾಯಿ ಬಿಟ್ಟಿದ್ದು, ಮೂವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೀಗ ಪೊಲೀಸರ ಮುನ್ನೆಚ್ಚರಿಕೆಯಿಂದ ಶಿವಮೊಗ್ಗದಲ್ಲಿ ಸಂಭವಿಸಬಹುದಾಗಿದ್ದ ಮತ್ತೊಂದು ಅನಾಹುತ ತಪ್ಪಿಸಿದಂತಾಗಿದೆ. ಇತ್ತೀಚೆಗೆ ನ್ಯೂ ಮಂಡ್ಲಿ ಬಳಿ ಬೈಕ್ ’ ನಲ್ಲಿ ತೆರಳುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ನೊಬ್ಬನ ಸಹೋದರನನ್ನು ಆರೋಪಿಗಳು ಅಡ್ಡಗಟ್ಟಿದ್ದರು. ಮಾರಕಾಸ್ತ್ರಗಳನ್ನು ತೋರಿಸಿ ನಿನ್ನ ಸಹೋದರ ಎಲ್ಲಿದ್ದಾನೆ? ಸಂಜೆಯೊಳಗೆ ಆತನನ್ನು ಸಾಯಿಸುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!