ಉಡುಪಿ: ಪ್ರತ್ಯೇಕ ಪ್ರಕರಣ – ಇಬ್ಬರು ನೇಣಿಗೆ ಶರಣು

ಬ್ರಹ್ಮಾವರ ಎ.26 (ಉಡುಪಿ ಟೈಮ್ಸ್ ವರದಿ): ಬ್ರಹ್ಮಾವರ ಹಾಗೂ ಹೆಬ್ರಿಯಲ್ಲಿ ನಡೆದ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವ್ಯಕ್ತಿಗಳು‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬ್ರಹ್ಮಾವರದಲ್ಲಿ ನಡೆದ ಪ್ರಕರಣದಲ್ಲಿ ಬ್ರಹ್ಮಾವರದ ಆಶ್ರಯ ಹೊಟೇಲ್‌ನಲ್ಲಿ ರೂಮ್‌ ಬಾಯ್‌ ಆಗಿ ಕೆಲಸ ಮಾಡಿಕೊಂಡಿದ್ದ ಕಚ್ಚೂರಿನ ಭಾಸ್ಕರ ಪೂಜಾರಿ (34) ಎಂಬವರು‌ ತಮಗಿದ್ದ ಅನಾರೋಗ್ಯದಿಂದ ‌ ಜೀವನದಲ್ಲಿ ಜೀಗುಪ್ಸೆಗೊಂಡು ಇಂದು ತಾವು ಕೆಲಸ ಮಾಡುತ್ತಿದ್ದ ಹೋಟೆಲ್ ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದೆಡೆ ಹೆಬ್ರಿಯಲ್ಲಿ ನಡೆದ ಪ್ರಕರಣದಲ್ಲಿ ಬಂಗಾರಗುಡ್ಡೆ‌ ದೇಕಿಬೆಟ್ಟು ಎಂಬಲ್ಲಿ ನಾರಾಯಣ ನಾಯ್ಕ್ (78) ಎಂಬವರು  ತಮಗೆ ಕಾಲು ನೋವು ಇದೆ ಎಂದು ಮಾನಸಿಕ ಖಿನ್ಯತೆಗೆ ಒಳಗಾಗಿ ನಿನ್ನೆ ರಾತ್ರಿ ತಮ್ಮ ಮನೆಯ ಹಿಂದುಗಡೆ ಇರುವ ದನದ ಕೊಟ್ಟಿಗೆಯ ಹೊರಭಾಗದಲ್ಲಿ ನೇಣು ಹಾಕಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್: 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!