| ಕಾಳಿಮೇಡು (ತಮಿಳುನಾಡು) ಎ.27: ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ರಥೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಇಂದು ನಸುಕಿನ ವೇಳೆ ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಸುದ್ದಿ ವರದಿಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು ಕಾಳಿಮೇಡುವಿನ ಅಪ್ಪಾರ್ ಮಾದಂ ದೇವಸ್ಥಾನದ ರಥೋತ್ಸವದ ಮೆರವಣಿಗೆ ವೇಳೆ ರಥ ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿದಾಗ ಈ ದುರಂತ ಸಂಭವಿಸಿರುವುದಾಗಿ ಪೆÇಲೀಸರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ತಿರುಚಿರಾಪಲ್ಲಿ ಸೆಂಟ್ರಲ್ ಝೋನ್ ನ ಇನ್ಸ್ ಪೆಕ್ಟರ್ ಜನರಲ್ ಆಫ್ ಪೆÇಲೀಸ್ ವಿ.ಬಾಲಕೃಷ್ಣನ್ ವಿವರ ನೀಡಿದ್ದಾರೆ. ಹೈವೋಲ್ಟೇಜ್ ತಂತಿ ಸ್ಪರ್ಶಿಸಿದ ಪರಿಣಾಮ ರಥ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಘಟನೆಗೆ ಸಂಬಂಧಿಸಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಘಟನೆಯಲ್ಲಿ ಸಾವನ್ನಪ್ಪಿರುವ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಇನ್ನು ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದು, ಮೃತಪಟ್ಟ ಕುಟುಂಬ ಸದಸ್ಯರಿಗೆ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಈ ನಡುವೆ ತಮಿಳುನಾಡಿನ ತಂಜಾವೂರಿನಲ್ಲಿ ಪ್ರತಿವರ್ಷ ನಡೆಯುವ ಈ ರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಭಾಗವಹಿಸುತ್ತಾರೆ ಎಂಬುದು ಗೊತ್ತಿದ್ದರೂ ರಥೋತ್ಸವದ ಕುರಿತು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿರುವುದಾಗಿ ವದಿಯಲ್ಲಿ ತಿಳಿಸಲಾಗಿದೆ.
| |