ಉಡುಪಿ: ಮಳೆ ನೀರು ಹರಿಯುತ್ತಿದ್ದ ಚರಂಡಿಗೆ ಬಿದ್ದು ಮಹಿಳೆ ಮೃತ್ಯು
ಉಡುಪಿ: ಜಿಲ್ಲೆಯಲ್ಲಿ ಮೂರು ದಿನಗಳಿಂದ ನಿರಂತರ ಗಾಳಿ, ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿದೆ. ಈಗಾಗಲೇ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ. ಆಗಸ್ಟ್.6, 9 ಮತ್ತು 10ನೇ ತಾರೀಖಿನಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಾರ್ವಜನಿಕರು ನದಿ, ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ನೀಡಿದೆ.
ನಗರದ ಹೊರ ವಲಯದ ನಿಟ್ಟೂರು-ಹನುಮಂತ ನಗರದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮಳೆ ನೀರು ಹರಿಯುತ್ತಿದ್ದ ಚರಂಡಿಗೆ ಬಿದ್ದು ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮದ ಕಕ್ಕುಂಜೆ ನಿವಾಸಿ ಗುಲಾಬಿ (60) ಮೃತಪಟ್ಟವರು. ಆಕಸ್ಮಿಕವಾಗಿ ಕಾಲು ಜಾರಿ ಮಳೆ ನೀರು ತುಂಬಿ ಹರಿಯುತ್ತಿದ್ದ ರಸ್ತೆ ಬದಿಯ ಚರಂಡಿಗೆ ಬಿದ್ದು, ನೀರಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.
.
ಮಂಗಳವಾರ ತಡರಾತ್ರಿ, ಬುಧವಾರ ಇಡೀ ದಿನ ನಿರಂತರ ಮಳೆಯಾಗಿದ್ದು, ಗಾಳಿ-ಮಳೆ ಪರಿಣಾಮ ಹಲವೆಡೆ ಹಾನಿ ಸಂಭವಿಸಿದೆ.
ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ದೂರವಾಣಿ ಕರೆ ಮಾಡಿ, ಮಳೆ ಪರಿಸ್ಥಿತಿ, ಹಾನಿ ಕುರಿತು ವಿಚಾರಿಸಿದ್ದಾರೆ. ತುರ್ತು ನೆರವಿನ ಅಗತ್ಯವಿದ್ದಲ್ಲಿ ನಮ್ಮನ್ನು ಸಂಪರ್ಕಿಸುವಂತೆ ಡಿಸಿ ಜಗದೀಶ್‌ಗೆ ಸೂಚನೆ ನೀಡಿದ್ದಾರೆ.