ಇಂಧನ ಸಚಿವರ ಕ್ಷೇತ್ರದಲ್ಲಿಯೇ ನಿರಂತರ ಪವರ್ ಕಟ್- ಯುವ ಕಾಂಗ್ರೆಸ್ ಪ್ರತಿಭಟನೆಯ ಎಚ್ಚರಿಕೆ

ಉಡುಪಿ ಎ.28: ಕಾರ್ಕಳದಲ್ಲಿ ನಿರಂತರ ವಿದ್ಯುತ್ ನಿಲುಗಡೆಯಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದ್ದು ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, ಒಂದೆಡೆ ಬೇಸಿಗೆಯ ಬಿಸಿ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಹಗಲು ರಾತ್ರಿ ಎನ್ನದೆ ವಿದ್ಯುತ್ ನಿಲುಗಡೆಗೆ ಜನರು ಆಕ್ರೋಶ ಗೊಂಡಿದ್ದಾರೆ. ಮತ್ತೊಂದೆಡೆ ಕೃಷಿಕರಿಗೆ ಪಂಪ್ ಸೆಟ್ ಗಳ ಬಳಕೆಗೆ ವಿದ್ಯುತ್ ನಿಲುಗಡೆಯಿಂದಾಗಿ ತುಂಬಾ ಸಮಸ್ಯೆಯಾಗುತ್ತಿದೆ. ಇಷ್ಟು ಮಾತ್ರವಲ್ಲದೆ  ವಿದ್ಯುತ್ ಅವಲಂಬಿತ ಅನೇಕ ಕಾರ್ಯಚಟುವಟಿಕೆಗಳಿಗೆ ವಿದ್ಯುತ್ ನಿಲುಗಡೆಯಿಂದ ಭಾರೀ ಸಮಸ್ಯೆಯಾಗುತ್ತಿದೆ ಎಂದು ಅವರು ದೂರಿದ್ದಾರೆ.

ಇನ್ನು ಇಂಧನ ಸಚಿವ ಸುನಿಲ್ ಕುಮಾರ್ ಅವರ ಕ್ಷೇತ್ರದಲ್ಲಿಯೇ ನಿರಂತರ ವಿದ್ಯುತ್ ನಿಲುಗಡೆಯಾಗುತ್ತಿದೆ. ಈ ಬಗ್ಗೆ ಶೀಘ್ರವಾಗಿ ಇಂಧನ ಸಚಿವರು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ವಿದ್ಯುತ್ ನಿಲುಗಡೆ ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!