ಪಿಎಸ್ಸೈ ನೇಮಕಾತಿ ಪರೀಕ್ಷೆಯ ಅಕ್ರಮ: 545 ಪಿಎಸ್ಸೈ ಹುದ್ದೆ ರದ್ದು
ಬೆಂಗಳೂರು, ಎ.29: ಪಿಎಸ್ಸೈ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ 545 ಪಿಎಸ್ಸೈ ಹುದ್ದೆ ನೇಮಕಾತಿ ಪರೀಕ್ಷೆಯನ್ನು ರಾಜ್ಯ ಸರಕಾರ ರದ್ದುಗೊಳಿಸಿದೆ ಎಂದು ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, 545 ಪಿಎಸ್ಸೈ ಹುದ್ದೆ ನೇಮಕಾತಿಗಾಗಿ ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಈ ಹುದ್ದೆಗೆ ಪರೀಕ್ಷೆ ಬರೆದಿದ್ದ 54,289 ಮಂದಿಯಲ್ಲಿ ಅಕ್ರಮ ಪ್ರಕರಣದ ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ಮರು ಪರೀಕ್ಷೆ ಮಾಡಲಾಗುವುದು ಹಾಗೂ ಮರು ಪರೀಕ್ಷೆ ಬಗ್ಗೆ ಶೀಘ್ರದಲ್ಲೇ ದಿನಾಂಕ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.