ಮಣಿಪಾಲ: ವಿಷ ಸೇವಿಸಿ ಹೋಟೆಲ್ ಕಾರ್ಮಿಕ ಆತ್ಮಹತ್ಯೆ

ಮಣಿಪಾಲ ಎ.29 (ಉಡುಪಿ ಟೈಮ್ಸ್ ವರದಿ): ಮಣಿಪಾಲದಲ್ಲಿ ರಜತ ಎಂಬ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.

ರಜತ (19) ಅವರು ಸುಮಾರು 7-8 ತಿಂಗಳಿನಿಂದ ಮಣಿಪಾಲದ ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ಎ.18 ರಂದು ಬೆಳಿಗ್ಗೆ 10 ಗಂಟೆಗೆ ಮನೆಯಿಂದ ಕೆಲಸಕ್ಕೆ ಹೋಗಿದ್ದುರು. ಬಳಿಕ ಅದೇ ದಿನ ರಾತ್ರಿ 12:00 ಗಂಟೆಗೆ ಮನೆಗೆ ವಾಪಾಸ್ಸು ಬಂದಿದ್ದರು. ಮರುದಿನ ಬೆಳಿಗ್ಗೆ ಅಸ್ವಸ್ಥಗೊಂಡಿದ್ದ ಅವರನ್ನು ಮನೆಯವರು ವಿಚಾರಿಸಿದಾಗ ವಿಷವನ್ನು ಸೇವಿಸಿದ್ದಾಗಿ ಅವರು ತಿಳಿಸಿದ್ದಾರೆ. ಈ ವೇಳೆ ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಶೇಖರ ನಾಯ್ಕ ಎಂಬವರು ನೀಡಿದ ಮಾಹಿತಿಯಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

error: Content is protected !!