| ಬೆಂಗಳೂರು ಎ.30: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಕಡಿಮೆಯಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇನ್ನು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ.1ರವರೆಗೂ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲುನೊಂದಿಗೆ ಭಾರೀ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಬೆಳಗಾವಿ, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉಡುಪಿ, ಕೊಡಗಿನಲ್ಲಿ ಮಳೆ ಮುಂದುವರೆಯಲಿದೆ. ಬೆಂಗಳೂರು ನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಹಾಸನ ಜಿಲ್ಲೆಗಳಲ್ಲಿ ಕೂಡ ಮಳೆಯ ಮುನ್ಸೂಚನೆ ನೀಡಲಾಗಿದೆ. ಇನ್ನೆರಡು ದಿನ ರಾಜ್ಯದಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. | |