ಬೈಂದೂರು: ಮಹಿಳೆ ನೇಣಿಗೆ ಶರಣು

ಬೈಂದೂರು ಎ.30 (ಉಡುಪಿ ಟೈಮ್ಸ್ ವರದಿ): ತಮಗಿದ್ದ ಅನಾರೋಗ್ಯ ಸಮಸ್ಯೆಯಿಂದ ಮನನೊಂದು ಯಡ್ತರೆ ಗ್ರಾಮದ ಶ್ರೀಲತಾ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀಲತಾ (36) ಅವರು ತಮಗೆ ಆಗಾಗ ಕಾಣಿಸಿಕೊಳ್ಳುತ್ತಿದ್ದ ಹೊಟ್ಟೆ ನೋವಿನಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ಸಂಜೆ ವೇಳೆಯಡ್ತರೆ ಗ್ರಾಮದ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣು ಬಿಗಿದುಕೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ನಾಗೇಶ್ ಎಂಬವರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ,ಸಹಾಯವಾಣಿ ನಂಬರ್: 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!