ಭಾರೀ ಮಳೆ: ಹಿರಿಯ ಸಹೋದ್ಯೋಗಿಗಳಿಗೆ ಜವಾಬ್ದಾರಿ ಹಂಚಿ- ಸಿಎಂಗೆ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ  ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ ದ್ದಾರೆ.

ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯ ಪ್ರವೃತ್ತವಾಗಿ ಜನರನ್ನು  ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಅವರು ಟ್ವಿಟ್ ಮೂಲಕ ಒತ್ತಾಯಿಸಿದ್ದಾರೆ.

ರಾಜ್ಯ ಕಂದಾಯ ಸಚಿವರೂ ಕ್ವಾರಂಟೈನ್‌ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ. ಇತ್ತೀಚೆಗೆ  ವರ್ಗಾವಣೆಗೊಂಡಿರುವ ಬಿಬಿಎಂಪಿ ಆಯುಕ್ತರಿಗೆ ಕಂದಾಯ ಇಲಾಖೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿರುವುದರಿಂದ ಪ್ರವಾಹ ಪರಿಸ್ಥಿತಿಯ ಉಸ್ತುವಾರಿ ಕಾರ್ಯ ಕುಂಠಿತಗೊಂಡಿದೆ.ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಸಲಹೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!