ಯಾರೂ ಮುಖ್ಯಮಂತ್ರಿಯಾಗುವ ಕನಸು ಕಾಣಬೇಡಿ -ಸಚಿವ ಆರ್.ಅಶೋಕ್
ಬೆಂಗಳೂರು ಮೇ.3: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಯಾರೂ ಮುಖ್ಯಮಂತ್ರಿಯಾಗುವ ಕನಸು ಕಾಣಬೇಡಿ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು. ಸಿಎಂ ಬೊಮ್ಮಾಯಿಗೆ ಕೇಂದ್ರದ ಸಂಪೂರ್ಣ ಸಹಕಾರ ಇದೆ. ಸಿಎಂ ಬದಲಾವಣೆ ಬಗ್ಗೆ ಯಾರೂ ಹಗಲುಗನಸು ಕಾಣಬೇಡಿ. ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದಾರೆ.
ಅಮಿತ್ ಶಾ ಬಂದಿದ್ದಾರೆ ಎಂದರೆ ಗೆಲುವು ನಮ್ಮದೆ ಎಂದ ಅವರು, ಕಾಂಗ್ರೆಸ್ ತಿಪ್ಪರಲಾಗ ಹಾಕಿದರೂ ಗೆಲುವು ನಮ್ಮದೇ, ಹೊರಟ್ಟಿ ಬಿಜೆಪಿ ಸೇರಿರುವುದು ಒಳ್ಳೆಯ ಬೆಳವಣಿಗೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.