ಕೊಲ್ಲೂರು: ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ಕಳ್ಳತನ

ಕೊಲ್ಲೂರು ಎ.3(ಉಡುಪಿ ಟೈಮ್ಸ್ ವರದಿ): ಕುಂದಾಪುರ ತಾಲೂಕಿನ ಹೊಸೂರು ಗ್ರಾಮದ ಕಾನ್ ಬೇರು ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಬಗ್ಗೆ ದೂರು ದಾಖಲಾಗಿದೆ.

ಮೇ.1 ರ ಬೆಳಿಗ್ಗೆಯಿಂದ ಮೇ.2 ರ ಬೆಳಿಗ್ಗೆ ವರೆಗಿನ ನಡುವಿನ ಅವಧಿಯಲ್ಲಿ ಕಳ್ಳತನ ನಡೆದಿದೆ. ಕುಂದಾಪುರ ತಾಲೂಕಿನ ಹೊಸೂರು ಗ್ರಾಮದ ಕಾನ್’ಬೇರು ಶ್ರೀಮಹಿಷಮರ್ದಿನಿ ದೇವಸ್ಥಾನದ ಹಿಂಬದಿ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಗರ್ಭಗುಡಿ ಬಳಿಯಿದ್ದ ಕಾಣೆಕೆ ಡಬ್ಬಿಯ ಬೀಗವನ್ನು ಒಡೆದು ಅದರಲ್ಲಿದ್ದ ಸುಮಾರು 20,000 ದಿಂದ 22,000 ರೂಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!