| ವಿಜಯಪುರ ಎ.2: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಮೇ 10ರ ಒಳಗೆ ಸಿಎಂ ಬದಲಾವಣೆ ಆಗಬಹುದು ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಹಾಗೂ ಪಾರ್ಟಿ ಹಿತದೃಷ್ಟಿಯಿಂದ ಪಕ್ಷ ಒಳ್ಳೆಯ ನಿರ್ಣಯ ತೆಗೆದುಕೊಳ್ಳುತ್ತದೆ. ನಿನ್ನೆ ದೆಹಲಿಯಲ್ಲಿ ಹೈ ಪವರ್ ಸಭೆ ನಡೆಸಲಾಗಿದೆ. ಅಂತಿಮ ತೀರ್ಮಾನವನ್ನು ಪ್ರಧಾನಿ ಮೋದಿ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿಎಂ ಬದಲಾವಣೆಯಾದರೆ ಒಬ್ಬರಿಗೆ ಜೈಲಿಗೆ ಹೋಗುವ ಭಯ ಇದೆ. ಇನ್ನೊಬ್ಬರಿಗೆ ಸಿಎಂ ಆಗಲ್ಲ ಎನ್ನುವ ಭಯ ಇದೆ ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಿರುದ್ಧ ವ್ಯಂಗ್ಯವಾಡಿದರು. | |