ಯತ್ನಾಳ್ ಏನು ಬಿಜೆಪಿ ಹೈಕಮಾಂಡಾ ?- ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ ಮೇ.5: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಏನು ಬಿಜೆಪಿ ಹೈಕಮಾಂಡಾ ಎಂದು ಸಿಎಂ ಬದಲಾವಣೆ ಕುರಿತ ಹೇಳಿಕೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಖಾರವಾಗಿ ಪ್ರಶ್ನಿಸಿದ್ದಾರೆ.
ಹಾವೇರಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದಿನವೂ ಸಿಎಂ ಬದಲಾವಣೆ, ಮಂತ್ರಿಮಂಡಲ ಬದಲಾವಣೆ ಅನ್ನುತ್ತಾ ಕೆಲವೊಂದು ಪಟ್ಟಭದ್ರ ಹಿತಾಸಕ್ತಿಗಳು ಆಡಳಿತವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿವೆ. ಅಮಿತ್ ಶಾ, ಅರುಣ್ ಸಿಂಗ್ ಅವರು ಹೇಳಿದರೆ ಅದಕ್ಕೊಂದು ಬೆಲೆ ಇದೆ.ಶಾಸಕ ಯತ್ನಾಳರೇನು ಪಕ್ಷದ ಹೈಕಮಾಂಡಾ? ಯತ್ನಾಳ್ ಅವರು ಅಮಿತ್ ಶಾ ಅವರಿಗೆ ಸಮಾನವಾಗಿ ನಿಲ್ಲುತ್ತಾರಾ? ಎಂದು ಪ್ರಶ್ನಿದ್ದಾರೆ.
ಹಾಗೂ ಯತ್ನಾಳರಿಗೇನಾದ್ರೂ ಫೋನ್ ಮಾಡಿ ಹೇಳಿದ್ದಾರೋ ಗೊತ್ತಿಲ್ಲ. ನಾಲ್ಕೈದು ಸಚಿವ ಸ್ಥಾನಗಳು ಖಾಲಿ ಇವೆ. ಅದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು. ಯಾವಾಗ ವಿಸ್ತರಣೆ ಮಾಡುತ್ತಾರೋ ಅದು ಅವರ ಪರಮಾಧಿಕಾರ ಎಂದು ತಿಳಿಸಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ಸರ್ಕಾರ ಬೇಗ ರಾಜೀನಾಮೆ ಕೊಡಬೇಕು, ತಾವು ಸಿಎಂ ಆಗಬೇಕು ಅನ್ನೋ ಹಂಬಲ, ಆಸೆಯಿದೆ. ಅದಕ್ಕಿಂತಲೂ ಹೆಚ್ಚಿನ ಹಂಬಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗಿದೆ ಎಂದು ಟೀಕಿಸಿದ್ದಾರೆ.