ಉಡುಪಿ: 217 ಪಾಸಿಟಿವ್, 1685 ನೆಗೆಟಿವ್, ಕೊರೋನಾ ಮೃತರ ಸಂಖ್ಯೆ 50ಕ್ಕೆ ಏರಿಕೆ

ಉಡುಪಿ: (ಉಡುಪಿ ಟೈಮ್ಸ್ ವರದಿ) ಜಿಲ್ಲೆಯಲ್ಲಿ ಗುರುವಾರ 217 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದೆ. ಉಡುಪಿ-90 ,ಕಾರ್ಕಳ-44, ಕುಂದಾಪುರ-81 ಮಂದಿಯಲ್ಲಿ ಪಾಸಿಟಿವ್ ದೃಢವಾಗಿದೆ. 1685 ಮಂದಿಯ ಗಂಟಲ ದ್ರವದಲ್ಲಿ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ 5353 ಒಟ್ಟು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

3157 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರು, ಜಿಲ್ಲೆಯಲ್ಲಿ 2153 ಸಕ್ರಿಯ ಪ್ರಕರಣಗಳಿವೆ. ಇಂದು 6 ಮಂದಿ ಮೃತರಾಗಿದ್ದು, ಒಟ್ಟು ಜಿಲ್ಲೆಯಲ್ಲಿ50 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!