ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ನಿಧನ
ಯುಎಇ ಮೇ.13 : ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅವರು ಇಂದು ನಿಧನರಾಗಿದ್ದಾರೆ.
ಶೇಖ್ ಖಲೀಫಾ ಯುಎಇಯ ಎರಡನೇ ಅಧ್ಯಕ್ಷರಾಗಿದ್ದ ಹಿಸ್ ಹೈನೆಸ್ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ಯುಎಇ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಸಂತಾಪ ಸೂಚಿಸಿದೆ.
ಶುಕ್ರವಾರದಿಂದ 40 ದಿನಗಳ ಕಾಲ ಅಧ್ಯಕ್ಷರ ನಿಧನಕ್ಕೆ ಅಧಿಕೃತ ರಾಷ್ಟ್ರೀಯ ಶೋಕಾಚರಣೆಯನ್ನು ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಘೋಷಿಸಿದೆ.ಇನ್ನು ಇಂದಿನಿಂದ ಮೂರು ದಿನಗಳ ಕಾಲ ಸಾರ್ವಜನಿಕ ಮತ್ತು ಖಾಸಗಿ ವಲಯಗಳ ಕೆಲಸವನ್ನು ನಿಲ್ಲಿಸಬೇಕು ಎಂದು ದುಬೈ ಮಾಧ್ಯಮ ಕಚೇರಿ ತಿಳಿಸಿದೆ. ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು 2004ರ ನ. 3 ರಿಂದ ಯುಎಇ ನ ಅಧ್ಯಕ್ಷರಾಗಿ ಮತ್ತು ಅಬುಧಾಬಿಯ ಆಡಳಿತಗಾರನಾಗಿದ್ದರು.