ಕೆಲಸದಲ್ಲಿ ತೃಪ್ತಿ ಇಲ್ಲ ಎಂದು ಪೊಲೀಸ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಅಮರವತಿ ಮೇ.14: ಕೆಲಸದಲ್ಲಿ ತೃಪ್ತಿ ಇಲ್ಲ ಎಂದು ಡೆತ್ ನೋಟ್ ಬರೆದು ಆಂಧ್ರ ಪ್ರದೇಶದಲ್ಲಿ ಪೊಲೀಸ್ ಒಬ್ಬರು ಮನೆಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸರ್ಪವರಂ  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದ ಸಬ್-ಇನ್ಸ್‍ಸ್ಪೆಕ್ಟರ್ ಮುತ್ತವರಪು ಗೋಪಾಲಕೃಷ್ಣ (36) ಆತ್ಮಹತ್ಯೆ ಮಾಡಿಕೊಂಡವರು. ಇವರು ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ತಮ್ಮ ಮನೆಯಲ್ಲಿಯೇ ಸರ್ವಿಸ್ ರಿವಾಲ್ವರ್‍ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೋಂಡಿದ್ದಾರೆ.

ಮುತ್ತವರಪು ಗೋಪಾಲಕೃಷ್ಣ ಅವರ ಮೃತದೇಹದ ಪಕ್ಕದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಈ ಡೆತ್ ನೋಟ್ ನಲ್ಲಿ ಗೋಪಾಲ್ ಕೃಷ್ಣ ಅವರು `ತಮ್ಮ ಕೆಲಸದಲ್ಲಿ ತೃಪ್ತಿಯಿಲ್ಲ’ ಎಂದು ಬರೆದುಕೊಂಡಿದ್ದಾರೆ. ಕೃಷ್ಣ ಅವರ ಪತ್ನಿ ನೀಡಿದ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಕಾಕಿನಾಡ ಪೊಲೀಸ್ ಅಧೀಕ್ಷಕ ಎಂ ರವೀಂದ್ರನಾಥ್ ಬಾಬು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!