ಬಂಟ ಸಮಾಜದ ಶ್ರೇಯೋಭಿವೃದ್ಧಿಗೆ ದಿ. ಸತೀಶ್ಚಂದ್ರ ಹೆಗ್ಡೆ ಕೊಡುಗೆ ಅಪಾರ-ಡಾ. ತಲ್ಲೂರು

ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ಸಮಾರಂಭವನ್ನು ಉದ್ಘಾಟಿಸಿದರು.

ಉಡುಪಿ: ಕಳೆದ 85-90ರ ದಶಕದಲ್ಲಿ ಬಂಟರ ಮಾತೃ ಸಂಘದ ಅಧ್ಯಕ್ಷರಾಗಿ ದಿ.ಸತೀಶ್ಚಂದ್ರ ಹೆಗ್ಡೆ ಅವರು ಬಂಟರ ಸಂಘವನ್ನು ಪ್ರಗತಿಯ ಉತ್ತುಂಗಕ್ಕೇರಿಸುವಲ್ಲಿ ಗಣನೀಯ ಕೊಡುಗೆ ನೀಡಿದ್ದಾರೆ. ಈ ಮಹಾನ್ ಸಾಧಕನ ಕೊಡುಗೆಯನ್ನು ಸದಾ ಸ್ಮರಿಸುವಂತಾಗಲು ಉಡುಪಿಯಲ್ಲಿ ಅವರ ಪುತ್ಥಳಿ ಅನಾವರಣ ಕಾರ್ಯ ನಡೆಯಬೇಕಿದೆ ಎಂದು ಬಂಟ ಸಮಾಜದ ಮುಂದಾಳು, ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘದ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.

ಅವರು ಭಾನುವಾರ ಬೆಳಗಾವಿಯ ಬಂಟರ ಭವನದಲ್ಲಿ ನಡೆದ ಬೆಳಗಾವಿಯ ಬಂಟರ ಯಾನೆ ನಾಡವರ ಸಂಘದ 38ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ, ಸಾಧಕರನ್ನು ಸನ್ಮಾನಿಸಿ ಮಾತನಾಡಿದರು. ದಿ.ಸತೀಶ್ಚಂದ್ರ ಹೆಗ್ಡೆ ಅವರು ತಮ್ಮ ಅಧಿಕಾರದ ಅವಧಿಯ 20 ವರ್ಷಗಳಲ್ಲಿ ಉಡುಪಿಯಲ್ಲಿ ಭವ್ಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣ, ಮಂಗಳೂರಿನಲ್ಲಿ ಬಂಟರ ಭವನ ಸೇರಿದಂತೆ ಹತ್ತು ಹಲವಾರು ಮೇರು ಕೊಡುಗೆಗಳನ್ನು ಸಮಾಜಕ್ಕೆ ಅರ್ಪಿಸಿದ್ದಾರೆ.

ಬಡವ, ಬಲ್ಲಿದರೆಂಬ ಭೇಧಭಾವವಿಲ್ಲದೆ ತನ್ನದೇ ಸ್ವಂತ ಖರ್ಚಿನಲ್ಲಿ ಎಲ್ಲರನ್ನೂ ಸಂಘದ ಸದಸ್ಯರನ್ನಾಗಿಸಲು ಶ್ರಮಿಸಿದ್ದಾರೆ. ಸಮಾಜಕ್ಕೆ ಅವರ ಕೊಡುಗೆಯ ಬಗ್ಗೆ ಅರಿವು ಮೂಡಿಸುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಉಡುಪಿಯ ಅಮ್ಮಣ್ಣ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಅವರ ಪುತ್ಥಳಿಯನ್ನು ಅನಾವರಣಗೊಳಿಸುವುದು ಅತೀ ಆವಶ್ಯಕವಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿಯೇಶನ್ ಅಧ್ಯಕ್ಷ ಜಿ.ಕೆ.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬಾಗಲಕೋಟೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಣಾಕರ ಶೆಟ್ಟಿ ನಂದ್ರೊಳ್ಳಿ ಅವರನ್ನು ಅಭಿನಂದಿಸಲಾಯಿತು.ಬೆಳಗಾವಿ ಬಂಟರ ಸಂಘದ ಗೌರವಾಧ್ಯಕ್ಷ ವಿಠಲ ಎಸ್.ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

ಬೆಳಗಾವಿ ಉತ್ತರ ಶಾಸಕ ಅನಿಲ ಬೆನಕೆ, ಸಂಘದ ಅಧ್ಯಕ್ಷ ಚಂದ್ರಶೇಖರ ಆರ್.ಶೆಟ್ಟಿ, ಸ್ವಾಗತ ಸಮಿತಿ ಅಧ್ಯಕ್ಷ ಪ್ರಭಾಕರ ಕೆ.ಶೆಟ್ಟಿ ಹಾಗೂ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.ಸಭಾ ಕಾರ್ಯಕ್ರಮದ ಬಳಿಕ ಯಕ್ಷಗಾನ ರಾಗ ವೈಭವ, ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊOಡವು.

Leave a Reply

Your email address will not be published. Required fields are marked *

error: Content is protected !!