ಕರಾವಳಿಯಲ್ಲಿ ಮೇ16 ರಿಂದ 6 ದಿನ ಭಾರೀ ಮಳೆ- ಯಲ್ಲೋ, ಆರೆಂಜ್,ರೆಡ್ ಅಲರ್ಟ್ ಘೋಷಣೆ
ಉಡುಪಿ ಮೇ.16(ಉಡುಪಿ ಟೈಮ್ಸ್ ವರದಿ): ಕರಾವಳಿಯಲ್ಲಿ ಇಂದಿನಿಂದ 6 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮೇ 21 ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದ್ದು ಎಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಯಲ್ಲಿ ಇಂದಿನಿಂದ(ಮೇ.16) ಮೇ.17 ರ ವರೆಗೆ 64.5 ರಿಂದ 115.5 ಮಿ.ಮಿ ಮಳೆಯಾಗಲಿದ್ದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೇ 17-18 ರವರೆಗೆ ಹಾಗೂ ಮೇ.19 ರಿಂದ 20 ರ ವರೆಗೆ ಕರಾವಳಿಯಲ್ಲಿ ಗುಡುಗು ಸಹಿತ 11.5 ರಿಂದ 204.4 ಮಿಮಿ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೂ ಮೇ.18 ರಿಂದ ಮೇ.19 ರ ವರೆಗೆ ಮಳೆಯ ಅಬ್ಬರ ಹೆಚ್ಚಾಗಲಿದ್ದು ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಮಳೆ ಬರುವ ಸಾಧ್ಯತೆ ಇದೆ. ಈ ಅವಧಿಯಲ್ಲಿ 204.5 ಮಿಮಿ ಗೂ ಕ್ಕೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಮೇ. 20 ರಿಂದ 21ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ಸೂಚನೆ ನೀಡಿದೆ.