ಮಲ್ಪೆ: ಮೀನುಗಾರ ನಾಪತ್ತೆ

ಉಡುಪಿ ಮೇ.16‌(ಉಡುಪಿ ಟೈಮ್ಸ್ ವರದಿ): ಮಲ್ಪೆಯಿಂದ ಬೋಟ್ ನಲ್ಲಿ ಹೋಗುತ್ತಿದ್ದ ವೇಳೆ ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಚಂದ್ರು ಗೊಂಡ ಎಂಬವರು ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ.

ನಿನ್ನೆ ರಾತ್ರಿ ಶಿವ ಸನ್ನಿಧಿ ಎಂಬ ಬೋಟಿನಲ್ಲಿ ಹೋಗುತ್ತಿದ್ದ ವೇಳೆ ಮಲ್ಪೆಯಿಂದ  6 ಮಾರ್ ದೂರದಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಇವರಿಗಾಗಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!