ಉಡುಪಿ: ಮೀನುಗಾರಿಕಾ ಇಲಾಖೆಯ ವಿವಿಧ ಯೋಜನೆ- ಅರ್ಜಿ ಆಹ್ವಾನ
ಉಡುಪಿ, ಮೇ 16: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಹಾಗೂ ಜಿಲ್ಲಾ ವಲಯದ ಯೋಜನೆಯಡಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರು ಮತ್ತು ಅಂಗವಿಕಲರಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನುಗಾರಿಕಾ ಸಲಕರಣೆ ಕಿಟ್, ಮೀನು ಮಾರಾಟ ವಾಹನ ಖರೀದಿಗೆ ಸಹಾಯ, ಜೀವರಕ್ಷಕ ಸಾಧನ, ಶಾಖ ನಿರೋಧಕ ಅಥವಾ ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಇತರೆ ಯೋಜನೆಗಳಿಗೆ ಮೀನುಗಾರರು ಜೂನ್ 30 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ, ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವOತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.