ಉಡುಪಿ ಪದವೀಧರೆ ಆತ್ಮಹತ್ಯೆ- ಮಾಧ್ಯಮಗಳು ಯಾಕೆ ಚರ್ಚಿಸುತ್ತಿಲ್ಲ?- ಡಿಕೆಶಿ ಟ್ವಿಟ್

ಉಡುಪಿಯ 23 ವರ್ಷದ ಸಹನಾ ಆತ್ಮಹತ್ಯೆಯ ವಿಷಯ ತಿಳಿದು ದುಃಖವಾಗಿದೆ. ಎಂಬಿಎ ಪದವಿ ಪಡೆದರೂ ಸಹ ಸೂಕ್ತ ಕೆಲಸ ದೊರೆಯದೆ ಆಕೆ ಸಾವಿಗೆ ಶರಣಾಗಿದ್ದಾಳೆ. ನಿರುದ್ಯೋಗದಿಂದ ಪ್ರಾಣ ಕಳೆದುಕೊಂಡಿರುವ ಪ್ರಕರಣ ರಾಜ್ಯದಲ್ಲಿ ಇದೇ ಮೊದಲಲ್ಲ. ಪ್ರಾಣಹಾನಿಯ ವಿಷಯದಲ್ಲಿ ನನಗೆ ರಾಜಕೀಯ ಮಾಡುವ ಇಚ್ಛೆಯಿಲ್ಲ. ಅವಳ ಕುಟುಂಬಕ್ಕೆ ಸಾಂತ್ವನ ತಿಳಿಸುತ್ತೇನೆ. ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ನಾವು ಎಲ್ಲಿ ಎಡವುತ್ತಿದ್ದೇವೆ ಎಂದು ಸಮಾಜದ ಒಂದು ಭಾಗವಾಗಿ ಆತ್ಮಾವಲೋಕ‌ನ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಟ್ವಿಟ್ ಮಾಡಿದ್ದಾರೆ.

ಎಂಬಿಎ ಪದವೀಧರೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದರೆ ಖಂಡಿತವಾಗಿಯೂ ನಾವು ತಪ್ಪು ಹೆಜ್ಜೆ ಇಡುತ್ತಿದ್ದೇವೆ. ಇದೆಲ್ಲವು ಆಗುತ್ತಿರುವುದು ಯಾಕೆ? ನಮ್ಮ ಯುವಸಮೂಹ ಯಾಕೆ ಹತಾಶೆಯನ್ನು ಎದುರಿಸಬೇಕಿದೆ? ನೋಬೆಲ್ ಪುರಸ್ಕೃತರನ್ನು ಒಳಗೊಂಡಂತೆ ಜಗತ್ತಿನ ಹಲವು ಪ್ರಸಿದ್ಧ ಅರ್ಥಶಾಸ್ತ್ರಜ್ಞರು ಭಾರತೀಯರು. ಉದ್ಯೋಗವನ್ನು ಸೃಷ್ಟಿ ಮಾಡಲು ನಾವು ಅವರ ಪರಿಣತಿಯನ್ನು ಉಪಯೋಗಿಸಿಕೊಳ್ಳಬಹುದಲ್ಲವೆ? ಭಾರತವು ಇದೀಗ 100 ನವೋದ್ಯಮಗಳನ್ನು ಹೊಂದಿದೆ. ಕರ್ನಾಟಕವು ಭಾರತದಾದ್ಯಂತ ಜನರಿಗೆ ಉದ್ಯೋಗ ಸೃಷ್ಟಿಸುತ್ತಿದೆ. ಆದರೂ ಯಾಕೆ ಅತಿಹೆಚ್ಚಿನ ನಿರುದ್ಯೋಗ ಪ್ರಮಾಣ ಹಾಗೂ ಆತ್ಮಹತ್ಯೆ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ? ಮಾಧ್ಯಮಗಳು ಈ ಕುರಿತು ಯಾಕೆ ಚರ್ಚಿಸುತ್ತಿಲ್ಲ?ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!