ಬೊಜ್ಜು ಕರಗಿಸಲು ಹೋಗಿ ಕೊನೆಯುಸಿರು ತೆಗೆದ ಕಿರುತೆರೆ ನಟಿ!

ಬೆಂಗಳೂರು: ಫ್ಯಾಟ್‌ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್‌ ಮೃತಪಟ್ಟಿದ್ದಾರೆ ಎಂದು ವೈದ್ಯರ  ವಿರುದ್ಧ ಮೃತರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ನಟಿ ಕುಟುಂಬ ವಾಸವಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ.

ಬೆಂಗಳೂರಿನ ನವರಂಗ ಸರ್ಕಲ್‌ನ ಡಾ. ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಚೇತನಾ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಫ್ಯಾಟ್ ಸರ್ಜರಿ ನಡೆಯುವಾಗಲೇ ಚೇತನಾ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

Leave a Reply

Your email address will not be published. Required fields are marked *

error: Content is protected !!