ಉಡುಪಿ: ನಿಶ್ಚಿತಾರ್ಥಕ್ಕೆ ಬಂದಿದ್ದ ತಾಯಿ, ಮಗು ನಾಪತ್ತೆ

ಉಡುಪಿ, ಮೇ 17: ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಬಂದಿದ್ದ ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎಂಬ ಮಹಿಳೆಯು ತನ್ನ ನಾಲ್ಕೂವರೆ ವರ್ಷದ ಮಗಳಾದ ಪುನರ್ವಿಯೊಂದಿಗೆ ಮೇ 13 ರಿಂದ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2561044, ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!