ಉಡುಪಿ ಆರೋಗ್ಯ ಇಲಾಖೆ, ಲಯನ್ಸ್ ಕ್ಲಬ್: ಡೆಂಗ್ಯೂ ಜಾಗೃತಿ ಜಾಥ

ಉಡುಪಿ ಮೇ.17 (ಉಡುಪಿ ಟೈಮ್ಸ್ ವರದಿ): ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಲಯನ್ಸ್ ಕ್ಲಬ್ ಉಡುಪಿ ಇದರ ಸಹಕಾರದೊಂದಿಗೆ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಅಂಗವಾಗಿ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜಾಥ ನಡೆಯಿತು.

ಚಿಟ್ಪಾಡಿಯ ಸೈಂಟ್ ಮೇರೀಸ್ ಕೈಗಾರಿಕಾ ತರಬೇತಿ ಕೇಂದ್ರದ ಆವರಣದಲ್ಲಿ ಈ ಜಾಗೃತಿ ಜಾಥಾಕ್ಕೆ ನಗರ ಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಚಾಲನೆ ನೀಡಿದರು.ಈ ಜಾಥದವು ಕೋರ್ಟ್ ರೋಡ್ ಮೂಲಕ  ಸಾಗಿ ವಿವಿಧ ಪ್ರಮುಖ ಸ್ಥಳಗಳಲ್ಲಿ ಡೆಂಗ್ಯೂ ಕುರಿತ ಜಾಗೃತಿ ಮೂಡಿಸಲಾಯಿತು. ಸುಮಾರು 300 ಕ್ಕೂ ಅಧಿಕ ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಗಳು ಈ ಜಾಥದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ರಜನಿ ಹೆಬ್ಬಾರ್, ಸೈಂಟ್ ಮೇರಿಸ್ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಜೋಕಿಮ್ ವಿಜಯ್ ಡಿಸೋಜಾ, ಲಯನ್ಸ್ ಕ್ಲಬ್ ಅಧ್ಯಕ್ಷ ಡಯಾನ ಎಂ.ವಿಠ್ಠಲ್ ಪೈ, ಕಾರ್ಯದರ್ಶಿ ವಿಷ್ಣುದಾಸ್ ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!