ಕಾಪು: ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಚರಣ್ ವಿಠಲ್ ಕುದಿ ಆಯ್ಕೆ
ಉಡುಪಿ ಮೇ.18: ಕಾಪು ಬ್ಲಾಕ್ ಕಾಂಗ್ರೆಸ್ (ಉತ್ತರ) ಪ್ರಚಾರ ಸಮಿತಿ ನೂತನ ಅಧ್ಯಕ್ಷರಾಗಿ ಚರಣ್ ವಿಠಲ್ ಕುದಿ ಅವರನ್ನು ಆಯ್ಕೆ ಮಾಡಲಾಗಿದೆ.
ಇತ್ತೀಚೆಗಿನ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ವಿನಯ್ ಕುಮಾರ್ ಸೊರಕೆ ಅವರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ (ಉತ್ತರ) ಪ್ರಚಾರ ಸಮಿತಿ ನೂತನ ಅಧ್ಯಕ್ಷರಾಗಿ ಚರಣ್ ವಿಠಲ್ ಕುದಿ ಅವರನ್ನು ಆಯ್ಕೆ ಮಾಡಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಾಯಿತು.
ಈ ಸಮಾರಂಭದಲ್ಲಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕಾಪು ಉತ್ತರ ವಲಯದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ ಕುಲಾಲ್ ಪಕ್ಕಾಲೂ, ಪ್ರಚಾರ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ದಿನೇಶ್ ಪುತ್ರನ್, ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ನೀರೆ ಕೃಷ್ಣ ಶೆಟ್ಟಿ ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.
ಚರಣ್ ವಿಠಲ್ ಕುದಿ ಅವರು, ಈ ಹಿಂದೆ ಕಾಪು ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡಿದ್ದರು, ಹಾಗೂ ಈ ಹಿಂದೆ ಕೊಡಿಬೆಟ್ಟು ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮಾತ್ರವಲ್ಲದೆ ಇವರು ಸಾಮಾಜಿಕ, ಸಮಾಜ ಸೇವಾಚಟುವಟಿಕೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.