ನೆರೆ ಹಾಗೂ ಪ್ರಾಕೃತಿಕ ವಿಕೋಪ ಪರಿಹಾರ ತುರ್ತು ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ

ಉಡುಪಿ, ಮೇ 18: ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳು ಉಂಟಾದಾಗ, ಸ್ಥಳಿಯ ಸಿಬ್ಬಂದಿಗಳು ತಕ್ಷಣದಲ್ಲಿ ಉತ್ತಮವಾಗಿ ಸ್ಪಂದಿಸಿದಾಗ. ಹೆಚ್ಚಿನ ಅನಾಹುತಗಳಾಗುವುದನ್ನು ತಪ್ಪಿಸುವ ಜೊತೆಗೆ ಪರಹಾರ ಕಾರ್ಯಗಳನ್ನು ತಕ್ಷಣ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ರಜತಾದ್ರಿಯ ಜಿ.ಪಂ ಸಭಾಂಗಣದಲ್ಲಿ, ಮುಂಗಾರು ಮಳೆ ಮತ್ತು ಕೃಷಿ ಚಟುವಟಿಕೆ ಪ್ರಾರಂಭ ಹಿನ್ನಲೆ ಕೈಗೊಳ್ಳಬೇಕಾದ ಮುಂಜಗ್ರತಾ ಕ್ರಮಗಳ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಚ್ಚಿನ ಮಳೆ ಗಾಳಿ ಸೇರಿದಂತೆ ಮತ್ತಿತರ ಪ್ರಕೃತಿ ವಿಕೋಪದ ಮುನ್ಸೂಚನೆಗಳು ಈಗಾಗಲೇ ದೊರೆಯುತ್ತಿದ್ದು, ಅದಕ್ಕೆ ಅನುಗುಣವಾಗಿ ಪೂರ್ವ ತಯಾರಿಗಳನ್ನು ಮಾಡಿಕೊಳ್ಳುವುದರ ಜೊತೆಗೆ, ಕಳೆದ ವರ್ಷಗಳಲ್ಲಿ ಸಂಭವಿಸಿರುವ ನೆರೆ ಪ್ರದೇಶಗಳನ್ನು ಗುರುತಿಸಿ ಅಗತ್ಯವಿರುವ ಎಲ್ಲಾ
ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ, ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಸಾಧ್ಯವಾಗುತ್ತದೆ ಎಂದರು.

ಪ್ರತೀ ತಾಲೂಕಿನಲ್ಲಿಯೂ ಪ್ರಕೃತಿ ವಿಕೋಪಗಳನ್ನು ಯಾವ ರೀತಿಯಲ್ಲಿ ತಂಡಗಳು ಎದುರಿಸಬೇಕು ಎಂಬ ಬಗ್ಗೆ ಅಣುಕು ಪ್ರದರ್ಶನ ಅಭ್ಯಾಸಗಳನ್ನು ಕೈಗೊಳ್ಳುವುದರಿಂದ, ವಿಕೋಪ ಸಂದರ್ಭವನ್ನು ಸಮರ್ಥವಾಗಿ ಎದುರಿಸಲು ಅನುಕೂಲವಾಗುವುದರ ಜೊತೆಗೆ ತಮಗೆ ಅಗತ್ಯವಿರುವ ಸುರಕ್ಷಿತಾ ಪರಿಕರಗಳ ಉಪಯೋಗದ ಬಗ್ಗೆಯೂ ಸಹ ಅನುಭವ ದೊರೆಯಲಿದೆ ಎಂದರು. ಪ್ರಕೃತಿ ವಿಕೋಪಗಳಿಂದ ಉಂಟಾಗುವ ಪ್ರಾಣ ಹಾನಿಗೆ 24 ಗಂಟೆಯೊಳಗೆ ಪರಿಹಾರವನ್ನು ಒದಗಿಸಬೇಕು, ಮನೆ ಹಾಗೂ ಬೆಳೆ ಹಾನಿಗಳ ಅಂದಾಜು ಮೊತ್ತವನ್ನು 48 ಗಂಟೆಯ ಒಳಗಾಗಿ ವರದಿಯನ್ನು ನೀಡುವುದರ ಜೊತೆಗೆ ಪರಿಹಾರ ಮೊತ್ತವನ್ನು ಸಾಧ್ಯವಾದಷ್ಟು ಶೀಘ್ರದಲ್ಲಿ ವಿತರಿಸುವ ಕಾರ್ಯಗಳು ಆಗಬೇಕು ಎಂದರು.

ತಾಲೂಕು ಮಟ್ಟದಲ್ಲಿ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಮತ್ತು ನಗರಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಪ್ರಕೃತಿ ವಿಕೋಪ ನಿರ್ವಹಣಾಸಮಿತಿ ಸಭೆಗಳನ್ನು ಮಾಡುವುದುರ ಜೊತೆಗೆ ಸಕಲ ಪೂರ್ವ ಸಿದ್ದತೆಗಳನ್ನು ಮಾಡಿಕೊಂಡು, ತೊಂದರೆಗೊಳಗಾದವರಿಗೆ ತಕ್ಷಣದಲ್ಲಿ ಸ್ಪಂದಿಸಲು ಮುಂದಾಗಬೇಕು ಎಂದು ಸೂಚನೆ ನೀಡಿದರು. ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಉಚಿತ ಸಹಾಯವಾಣಿ ಸಂಖ್ಯೆ 1077, ಮೆಸ್ಕಾಂ ಗೆ ಸಂಬOದಪಟ್ಟ ಸಮಸ್ಯೆಗಳಿಗೆ ಸಹಾಯವಾಣಿ ಸಂಖ್ಯೆ 1912 ಅಲ್ಲದೇ ರಕ್ಷಣೆಗೆ ಸಂಬOದಿಸಿದOತೆ ಸಹಾಯವಾಣಿ ಸಂಖ್ಯೆ 112 ಕ್ಕೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದರು.

ರಾಷ್ಟಿçÃಯ ಹೆದ್ದಾರಿಯಲ್ಲಿ ಮಳೆ ನೀರಿನಿಂದ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗದ0ತೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು, ಕುಂದಾಪುರ, ಪಡುಬಿದ್ರೆ, ಕಾಪು ನಲ್ಲಿ ರಾಷ್ಟಿಯ ಹೆದ್ದಾರಿಯಲ್ಲಿ ಬೀದಿ ದೀಪಗಳನ್ನು ಅಳವಡಿಸಬೇಕು,ಬೈಂದೂರಿನ ಕೆಲವು ಭಾಗಗಳಲ್ಲಿ ಮಣ್ಣು ಕುಸಿತಗಳಾಗುತ್ತವೆ ಈ ಬಗ್ಗೆ ಎಚ್ಚರವಹಿಸಬೇಕು ಎಂದ ಅವರು, ಈ ಸಂಬOದ ಸಾರ್ವಜನಿಕ
ಸಹಾಯವಾಣಿ 1033 ಗೆ ದೂರುಗಳು ಬಂದಲ್ಲಿ ತಕ್ಷಣ ಸ್ಪಂದಿಸಬೇಕು ಎಂದರು.

ಮಳೆಯ ನೀರು ಎಲ್ಲೆಂದರಲ್ಲಿ ನಿಲ್ಲುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಸಾಂಕ್ರಮಿಕ ರೋಗಳು ಹರಡುವ ಸಾಧ್ಯತೆಯಿರುವ ಹಿನ್ನಲೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಯಾವುದೇ ರೋಗ ಬಂದು ಚಿಕಿತ್ಸೆ ನೀಡುವ ಬದಲು ರೋಗ ಬಾರದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ಶೀಘ್ರದಲ್ಲಿಯೇ ತೆರವುಗೊಳಿಸುವ ಕಾರ್ಯಗಳನ್ನು ಕೈಗೊಳ್ಳ ಬೇಕು, ಮಳೆ ಗಾಳಿಯಿಂದ ಮರಗಳು ರಸ್ತೆಗೆ ಉರುಳಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗದOತೆ ಶೀಘ್ರದಲ್ಲಿಯೇ ತೆರವು ಕಾರ್ಯಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.ಜಿಲ್ಲೆಯಲ್ಲಿ ಈವರೆಗೆ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿದ್ದು,1 ಪ್ರಾಣಹಾನಿ, ಸಿಡಿಲಿನಿಂದ ಒಬ್ಬರಿಗೆ ಗಾಯ, ತೋಟಗಾರಿಕೆಗೆ 51 ಹಾನಿ ಪ್ರಕರಣಗಳು, 5 ಮನೆಗಳು ಪೂರ್ಣಪ್ರಮಾಣದಲ್ಲಿ ಹಾನಿಯಾಗಿ, 107 ಮನೆಗಳು ಭಾಗಶ: ಹಾನಿಯಾಗಿವೆ. ಒಟ್ಟಾರೆ 184 ಪ್ರಕರಣಗಳಲ್ಲಿ 56,53,118 ರೂ ನಷ್ಠವಾಗಿದ್ದು, 91 ಪ್ರಕರಣಗಳಿಗೆ 15,48,343 ರೂ ಪರಿಹಾರ ವಿತರಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಉತ್ತಮ ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿವೆ ರೈತರಿಗೆ ಅಗತ್ಯವಿರುವ ಭಿತ್ತನೆ ಬೀಜದ ದಾಸ್ತಾನು ಇಟ್ಟುಕೊಂಡು ಯಾವುದೇ ರೀತಿಯ ಕೊರತೆಯಾಗದಂತೆ ವಿತರಣೆಗೆ ಕ್ರಮ ಕೈಗೊಳ್ಳಬೇಕು , ರಸಗೊಬ್ಬರ ದಾಸ್ತಾನು ಇರುವಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ತುರ್ತು ಕಾಯಾಚರಣೆಗಳನ್ನು ಕೈಗೊಳ್ಳಲು ಅಗತ್ಯವಿರುವ ಬೋಟುಗಳು ಸೇರಿದಂತೆ ಮತ್ತಿತರ ಅಗತ್ಯ ಪರಿಕರಗಳನ್ನು ಖರೀದಿಸಲು ಹಾಗೂ ನೆರೆ ಸಂತ್ರಸ್ಥರಿಗೆ ಅನುಕೂಲವಾಗುವಂತೆ ಕಾಳಜಿ ಕೇಂದ್ರಗಳನ್ನು ತೆರೆಯಲು ಸೂಕ್ತ ಸ್ಥಳಗಳನ್ನು ಗುರುತಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಮಳೆ ಗಾಳಿಯಿಂದ ವಿದ್ಯುತ್ ಕಂಬಗಳು ಹಾಗೂ ಪ್ರಸರಣ ತಂತಿಗಳು ಹಾನಿ ಉಂಟಾದಾಗ ಕೂಡಲೇ ದುರಸ್ತಿ ಕಾರ್ಯಗಳನ್ನು ಕೈಗೊಂಡು ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದ ಅವರು, ತುಂಡಾದ ವಿದ್ಯುತ್ ತಂತಿಗಳನ್ನು ಸಾರ್ವಜನಿಕರು ಮುಟ್ಟದಂತೆ ವ್ಯಾಪಕ ಪ್ರಚಾರ ನೀಡುವಂತೆ ಮೆಸ್ಕಾಂ
ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್. ಕರಾವಳಿ ಕಾವಲು ಪಡೆಯ ಎಸ್ಪಿ ಅಂಶುಕುಮಾರ್, ಅಪರ ಜಿಲ್ಲಾಧಿಕಾರಿ ವೀಣಾ, ಎಎಸ್ಪಿ ಸಿದ್ದಲಿಂಗಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!