ರೋಡ್ ರೇಜ್ ಪ್ರಕರಣ: 34 ವರ್ಷಗಳ ನಂತರ ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ
ನವದೆಹಲಿ: 1988 ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 34 ವರ್ಷಗಳ ನಂತರ ಮಾಜಿ ಕ್ರಿಕೆಟಿಗ-ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ಎಸ್ ಕೆ ಕೌಲ್ ಅವರ ಪೀಠ, ರಸ್ತೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಿಧು ಅವರನ್ನು ಆರೋಪಮುಕ್ತಗೊಳಿಸಿದ್ದ ಮೇ 2018ರ ಆದೇಶವನ್ನು ಮರುಪರಿಶೀಲಿಸಿ ತೀರ್ಪು ನೀಡಿದೆ.
ಈ ಹಿಂದೆ ಸಿಧುಗೆ 1 ಸಾವಿರ ರೂಪಾಯಿ ದಂಡ ವಿಧಿಸಿ ಆರೋಪಮುಕ್ತಗೊಳಿಸಲಾಗಿತ್ತು. ಆದರೆ 65 ವರ್ಷದ ಸಂತ್ರಸ್ತೆಯ ಕುಟಂಬಂ ಇದನ್ನು ಪ್ರಶ್ನಿಸಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈಗ ಐಪಿಸಿ ಸೆಕ್ಷನ್ 323ರ ಅಡಿಯಲ್ಲಿ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 2018ರಲ್ಲಿ ಸಿಧುಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ್ದ ಪಂಜಾಬ್ ಮತ್ತು ಹರಿಯಾಣ ಕೋರ್ಟ್ ತೀರ್ಪುನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಆದರೆ ಹಿರಿಯ ನಾಗಕರಿಕರಿಗೆ ನೋವುಂಟು ಮಾಡಿದ ಆರೋಪದಲ್ಲಿ ಅವರಿಗೆ ಜೈಲು ಶಿಕ್ಷೆ ವಿಧಿಸದೆ 1 ಸಾವಿರ ರೂಪಾಯಿ ದಂಡ ವಿಧಿಸಿತ್ತು. ಸಿಧು 1988ರಲ್ಲಿ ರಸ್ತೆಯಲ್ಲಿ ದಾಂಧಲೆ ನಡೆಸಿ ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಗುರ್ನಮ್ ಮೃತಪಟ್ಟಿದ್ದರು. ಬಳಿಕ ಈ ಪ್ರಕಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು