ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಸಂದೇಶ ಕೈಬಿಡುವುದಿಲ್ಲ- ಕೋಟ ಶ್ರೀನಿವಾಸ

ಬೆಂಗಳೂರು ಮೇ.20: ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟಿದ್ದಾರೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿ ಸ್ಪಷ್ಟಪಡಿಸಿದ ಅವರು, ಈ ವಿಚಾರವಾಗಿ ಮುಖ್ಯಮಂತ್ರಿಯವರನ್ನು ಹಾಗೂ ಶಿಕ್ಷಣ ಸಚಿವರಾದ ನಾಗೇಶ್ ಅವರನ್ನು  ಭೇಟಿಯಾಗಿ ಮಾತನಾಡಿದ್ದು, ಯಾವುದೇ ಕಾರಣಕ್ಕೂ ಪಠ್ಯಪುಸ್ತಕದಲ್ಲಿ ನಾರಾಯಣಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆ ಇಲ್ಲ ಎಂದು ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!