ಜೂ.3ನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು ಮೇ.20: ಈಗಾಗಲೇ ನಿನ್ನೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಜೂನ್ 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲು ಗುರಿ ಹೊಂದಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ. ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗುತ್ತದೆ. ಜೂನ್ 15 ಕ್ಕೆ ಮೌಲ್ಯಮಾಪನ ಕಾರ್ಯಪೂರ್ಣಗೊಳಿಸಿ, ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.