ಬೆಂಗಳೂರಿಗೆ ಬರುತ್ತಿದ್ದ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ತುರ್ತು ಭೂ ಸ್ಪರ್ಶ
ಹೊಸದಿಲ್ಲಿ ಮೇ.20 : ಮುಂಬೈ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೇವಲ 27 ನಿಮಿಷಗಳಲ್ಲಿ ಏರ್ ಇಂಡಿಯಾದ A320neo ವಿಮಾನವು ತುರ್ತು ಸ್ಪರ್ಶ ಮಾಡಿದೆ.
A320neo ವಿಮಾನದ ಪೈಲಟ್ಗಳು ಬೆಳಗ್ಗೆ 9.43 ಕ್ಕೆ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನವು ನಿರ್ಗಮಿಸಿದ ಕೆಲವೇ ನಿಮಿಷಗಳ ನಂತರ ಇಂಜಿನ್ಗಳಲ್ಲಿ ತಾಂತ್ರಿಕ ದೋಷದ ಬಗ್ಗೆ ಎಚ್ಚರಿಕೆಯನ್ನು ಸ್ವೀಕರಿಸಿದರು.ಆ ಇಂಜಿನ್ ಸ್ಥಗಿತಗೊಂಡ ನಂತರ ಪೈಲಟ್ ಮುಂಬೈ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 10.10 ಕ್ಕೆ ಮತ್ತೆ ವಿಮಾನವನ್ನು ಇಳಿಸಿದರು ಎಂದು ಮೂಲಗಳು ತಿಳಿಸಿವೆ.
ತಾಂತ್ರಿಕ ದೋಷದಿಂದಾಗಿ ವಿಮಾನದ ಎಂಜಿನ್ಗಳಲ್ಲಿ ಒಂದನ್ನು ಸ್ಥಗಿತಗೊಳಿಸಿದ ಬಳಿಕ ಮುಂಬೈ ವಿಮಾನನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಗಿದೆ. ಬಳಿಕ ವಿಮಾನ ಬದಲಾವಣೆಯ ನಂತರ ಪ್ರಯಾಣಿಕರನ್ನು ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಈ ಘಟನೆಯ ಕುರಿತು ವಿಮಾನಯಾನ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ತನಿಖೆ ನಡೆಸುತ್ತಿದೆ. ಏರ್ ಇಂಡಿಯಾದ A320neo ವಿಮಾನಗಳು ಸಿಎಫ್ ಎಂನ ಲೀಪ್ ಎಂಜಿನ್ಗಳನ್ನು ಹೊಂದಿವೆ ಎಂದು ತಿಳಿದು ಬಂದಿದೆ.