ಉಡುಪಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜು- ದಾಖಲಾತಿ ಆರಂಭ
ಉಡುಪಿ: ಮಣಿಪಾಲ ಅನಂತ ನಗರದಲ್ಲಿರುವ ಉಡುಪಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2022-23 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್‌ಗಳಿಗೆ ಪ್ರವೇಶ ದಾಖಲಾತಿ ಆರಂಭಗೊಂಡಿದ್ದು, ನುರಿತ ಶಿಕ್ಷಕರ ತಂಡ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುವುದು. ದಾಖಲಾತಿಗೆ ಮೊದಲು ಬಂದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದೆಂದು ಕಾಲೇಜಿನ ಪ್ರಾಂಶುಪಾಲರಾದ ಎಚ್.ಆರ್.ಪುಷ್ಪಾ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನ್‌ಲೈನ್ ಹಾಗೂ ಕಾಲೇಜಿನಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿದೆ. ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ, ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ, ಹೈದರಾಬಾದ್ ಕರ್ನಾಟಕ ಮೀಸಲಾತಿ ಪ್ರಮಾಣ ಪತ್ರ ಬೇಕಿದೆ ಎಂದರು. ಉಪನ್ಯಾಸಕ ಎ. ಜೈರಾಜ್ ಮಾತನಾಡಿ, ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಎಲೆಕ್ಟ್ರೋನಿಕ್ಸ್ ಮತ್ತು ಕಮ್ಯುನಿಕೇನ್ ಎಂಜಿನಿಯರಿಂಗ್ ಕೋರ್ಸ್‌ಗಳು ಲಭ್ಯವಿದೆ. ನುರಿತ ಮತ್ತು ಅನುಭವಿ ಉಪನ್ಯಾಸಕ ವೃಂದವಿದ್ದು, ಸುಸಜ್ಜಿತ ಆಧುನಿತ ತರಗತಿಗಳು, ಪ್ರಯೋಗಾಲಯ, ವಸತಿ ನಿಲಯ, ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಗುವುದೆಂದು ಮಾಹಿತಿನೀಡಿದರು.
ಕಾಲೇಜಿನಲ್ಲಿ ಪ್ರತಿ ವರ್ಷವೂ ಕ್ಯಾಂಪಸ್ ಇಂಟರ್ವ್ಯೂ ನಡೆಸುತ್ತಿದ್ದು, ಹೆಚ್ಚಿನ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಸಿಕ್ಕಿದೆ. 15 ಕ್ಕೂ ಅOಕ ಕಂಪನಿಗಳು ಭಾಗವಹಿಸುತತಿದೆ. ಜನರಲ್ ಮೆರಿಟ್ ವಿದ್ಯಾರ್ಥಿಗಳಿಗೆ 4270 ರೂ., ಒಬಿಸಿ 960 ರೂ., ಎಸ್‌ಸಿ/ಎಸ್‌ಟಿ 430 ರೂ., ಶುಲ್ಕವಿದೆ ಎಂದರು. ಕಾಲೇಜಿನ ಉಪನ್ಯಾಸಕರಾದ ವಂದನಾ, ಶಿವಪ್ರಸಾದ್, ಸುನೀಲ್ ಕುಮಾರ್ ಬಿ. ಉಪಸ್ಥಿತರಿದ್ದರು