ತ್ರಿಬಲ್ ರೈಡಿಂಗ್ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬಸ್ ಡಿಕ್ಕಿ ಇಬ್ಬರ ಮೃತ್ಯು

ನಂಜನಗೂಡು ಮೇ.20: ತ್ರಿಬಲ್ ರೈಡಿಂಗ್ ನಲ್ಲಿದ್ದ ಮೂವರು ಯುವಕರು ಟ್ರಾಫಿಕ್ ಪೊಲೀಸರಿಂದ ತಪ್ಪಿಸಿ ಕೊಳ್ಳುವ ಭರದಲ್ಲಿ ಕೆಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮದಲ್ಲಿ ನಡೆದಿದೆ.

ತ್ರಿಬಲ್ ರೈಡಿಂಗ್ ನಲ್ಲಿದ್ದ ಮೂವರು ಯುವಕರ ಪೈಕಿ ಕೂಡ್ಲಾಪುರ ಗ್ರಾಮದ ಸಚಿನ್ ಹಾಗೂ ಹುಣಸನಾಳು ಗ್ರಾಮದ ದೊರೆಸ್ವಾಮಿ ಸಾವನ್ನಪ್ಪಿದ್ದ ದುರ್ದೈವಿ. ಈ ಅಪಘಾತದಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ರಘು ಎಂಬಾತ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ. ನಿನ್ನೆ ಸಂಜೆ ಮೂವರು ಯುವಕರು ಕೆಲಸ ಮುಗಿಸಿ ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಮೂಲಕ ಸ್ವಾ ಗ್ರಾಮಕ್ಕೆ ವಾಪಸಾಗುತ್ತಿದ್ದ ವೇಳೆ ಹುಣಸನಾಳು ಬಳಿ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಇದನ್ನು ಗಮನಿಸಿದ ಯುವಕರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯೂಟರ್ನ್ ತೆಗೆದುಕೊಂಡಿದ್ದಾರೆ.

ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕೆ.ಎಸ್.ಆರ್.ಟಿ.ಸಿ.ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಯುವಕರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು, ಕೂಡಲೇ ಸ್ಥಳೀಯರ ನೆರವಿನೊಂದಿದೆ ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಇಬ್ಬರು ಯುವಕರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ಘಟನೆಗೆ ಸಂಬಂಧಿಸಿ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!