ಸಂಪುಟ ವಿಸ್ತರಣೆ ಕುರಿತು ಚರ್ಚೆ ಇಲ್ಲ- ಮುಖ್ಯಮಂತ್ರಿ ಬೊಮ್ಮಾಯಿ
ಹೊಸದಿಲ್ಲಿ, ಮೇ 21: ರಾಜ್ಯದಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಕಳೆದ ಕೆಲವು ವಾರಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತ ಊಹಾಪೋಹಗಳಿಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ವಿಧಾನ ಪರಿಷತ್ತು ಮತ್ತು ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಕುರಿತು ಅಮಿತ್ ಶಾ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರು ತುರ್ತು ಕೆಲಸದ ಮೇಲೆ ಬೇರೆ ಕಡೆ ಹೋಗಿದ್ದರಿಂದ ಭೇಟಿ ಮಾಡಲು ಆಗಲಿಲ್ಲ. ದೂರವಾಣಿಯಲ್ಲೇ ಸುದೀರ್ಘವಾಗಿ ಮಾತಾನಾಡಿದ್ದೇವೆ. ಸಂಪುಟದ ಕುರಿತು ಯಾವುದೇ ಚರ್ಚೆ ಮಾಡಿಲ್ಲ ಎಂದಿದ್ದಾರೆ.
ನಾವು ಇದುವರೆಗೆ ಬಿಬಿಎಂಪಿ ಚುನಾವಣೆ ಬಗ್ಗೆ ಸುಪ್ರೀಂ ಆದೇಶಕ್ಕೆ ಕಾಯುತ್ತಿದ್ದೆವು. ಇದೀಗ ಕೆಲವೇ ದಿನಗಳಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಕುರಿತು ಸ್ಪಷ್ಟತೆ ಸಿಗಲಿದೆ. ಹೀಗಾಗಿ ಯಾವುದೇ ಚರ್ಚೆ ನಡೆಸಿಲ್ಲ ಇಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಜೊತೆ ಮಾತನಾಡಿದ್ದೇನೆ. ಸಂಪುಟ ವಿಸ್ತರಣೆ ಕುರಿತು ಚರ್ಚೆಯಾಗಿಲ್ಲ. ಕೋರ್ ಕಮಿಟಿ ಚರ್ಚೆಯ ವಿಚಾರಗಳು ಮತ್ತು ಪರಿಷತ್ ಹಾಗೂ ರಾಜ್ಯಸಭೆಯ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯ ಕುರಿತು ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.