ಬ್ರಹ್ಮಾವರ: ಸುಟ್ಟು ಕರಕಲಾದ ಕಾರಿನಲ್ಲಿ ಜೋಡಿಯ ಮೃತದೇಹ ಪತ್ತೆ
ಬ್ರಹ್ಮಾವರ:ಮಂದಾರ್ತಿ ಸಮೀಪ ಹೆಗ್ಗುಂಜೆಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ನಿರ್ಜನ ಪ್ರದೇಶದ ಕಾಡಿನ ರಸ್ತೆಯಲ್ಲಿ ಸುಟ್ಟುಹೋದ ಕಾರು ಹಾಗೂ ಎರಡು ಮೃತದೇಹ ಪತ್ತೆಯಾಗಿದೆ.
ಭಾನುವಾರ ಮುಂಜಾನೆ 3.30 ಗಂಟೆ ಸುಮಾರಿಗೆ ಬೆಂಕಿ ಹೊತ್ತಿ ಉರಿಯುವುದನ್ನು ನೋಡಿದ ಸ್ಥಳೀಯರು ವಿದ್ಯುತ್ ಅವಘಡ ಆಗಿರಬಹುದೇ ಎಂದು ಎದ್ದು ಬಂದು ನೋಡಿದರೆ ಹೊತ್ತಿ ಉರಿಯುವ ಕಾರು ಪತ್ತೆಯಾಗಿದೆ.
ಪೊಲೀಸರು, ಬೆರಳಚ್ಚು ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದು ಕಾರಿನಲ್ಲಿದ್ದವರು ಯಾರು? ಎಲ್ಲಿಂದ ಬಂದವರು? ಅಪಘಾತವೇ?, ಆತ್ಮಹತ್ಯೆಯೇ? ಎಂಬುದು ತನಿಖೆಯಿಂದ ತಿಳಿದು ಬರಬೇಕು.
UPDATED…
ಉಡುಪಿ: ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ? https://udupitimes.com/udupi-times-9375/