ರಾಜ್ಯಸಭೆ ಚುನಾವಣೆ: ಬಿಜೆಪಿಯ 3ನೇ ಅಭ್ಯರ್ಥಿ ಹೋಟೆಲ್‌ ಉದ್ಯಮಿ ಉಡುಪಿಯ ಪ್ರಕಾಶ್‌ ಶೆಟ್ಟಿ?

ನವದೆಹಲಿ: ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಂಬಂಧ ಶನಿವಾರ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಸಭೆ ಚುನಾವಣೆಗೆ ಪಕ್ಷದ 3ನೇ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದರು.

ಹಾಲಿ ಸದಸ್ಯರಾಗಿರುವ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಕೆ.ಸಿ. ರಾಮಮೂರ್ತಿ ಅವರನ್ನು ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ. ಮೂರನೇ ಅಭ್ಯರ್ಥಿ ಆಯ್ಕೆ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಜೆಡಿಎಸ್‌ ವರಿಷ್ಠರಿಗೂ ಆಪ್ತರಾಗಿರುವ ಹೋಟೆಲ್‌ ಉದ್ಯಮಿ ಪ್ರಕಾಶ್‌ ಶೆಟ್ಟಿ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿ ರಾಜ್ಯಸಭೆಗೆ ಕಳುಹಿಸುವ ಸಂಬಂಧ ಚಿಂತನೆ ನಡೆದಿದೆ. ಒಂದೆರಡು ದಿನ ಗಳಲ್ಲಿ ಈ ಕುರಿತು ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!