ಎಸ್’ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ನಿಧನ
ಬೆಳ್ತಂಗಡಿ: ಎಸ್’ಡಿಎಂ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್’ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ(66) ಅನಾರೋಗ್ಯದಿಂದ ಭಾನುವಾರ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ಬಿ.ಯಶೋವರ್ಮರವರು ಸಿಂಗಾಪೂರಕ್ಕೆ ಚಿಕಿತ್ಸೆಗಾಗಿ ಹೋಗಿದ್ದರು. ಭಾನುವಾರ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಬಂಧು ವರ್ಗ, ಕುಟುಂಬಸ್ಥರನ್ನು ಆಗಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರ.